ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಡಿ. ೧೫ ಮತ್ತು ೧೬ರಂದು ಶ್ರದ್ಧಾ ಭಕ್ತಿಪೂರ್ವಕವಾಗಿ ನಡೆಯಿತು.
ವೈದಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.ಡಿ. ೧೫ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ,ಮಹಾ ಗಣಪತಿ ಹೋಮ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು, ಹಸಿರು ಹೊರೆ ಕಾಣಿಕೆ ಸಮರ್ಪಣೆ, ತೋರಣ ಮುಹೂರ್ತ, ಮಧ್ಯಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಸುಹಾಸಿನಿ ಪೂಜೆ ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ ಶ್ರೀ ದೇವಿಗೆ ದೊಡ್ಡ ರಂಗಪೂಜೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ಬೆಡಿ ಪ್ರದರ್ಶನ ನಡೆಯಿತು.
ಡಿ. ೧೬ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ದೇವರಿಗೆ ಕಲಶಾಭಿಷೇಕ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಕೇರ್ಪಡ ಗೌಡ ಮನೆತನದ ಭಂಡಾರ ಮನೆಯಿಂದ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ಬಂದು ನೇಮೋತ್ಸವ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಸದಸ್ಯರಾದ ವೆಂಕಪ್ಪ ಗೌಡ ಆಲಾಜೆ, ರೂಪರಾಜ ರೈ, ನಾಗೇಶ್ ಆಳ್ವ, ಯೋಗಾನಂದ ಉಳೆಲಾಡಿ, ರಘುನಾಥ ಎಂಜೀರು, ಭಾಗ್ಯಪ್ರಸನ್ನ, ವಾರಿಜಾಕ್ಷಿ ಕೇರ್ಪಡ, ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯ, ಸೇವಾ ಸಮಿತಿ ಅಧ್ಯಕ್ಷ ಶಿವಾನಂದ ನಾಗಮಜಲು, ಗುಣವತಿ ನಾವೂರು, ಮತ್ತು ಸಮಿತಿಯ ಸದಸ್ಯರು, ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.