ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಪ್ರಾರಂಭ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17 ರಂದು ಧನುಪೂಜೆ ಪ್ರಾರಂಭಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಸದಸ್ಯರು,ಭಕ್ತಾದಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜ.14 ರವರೆಗೆ ಧನುಪೂಜೆ ನಡೆಯಲಿದೆ.