ಕುರುಂಜಿ ವೆಂಕಟ್ರಮಣ ಗೌಡರ 95ನೇ ಹುಟ್ಟುಹಬ್ಬದ ಸವಿ ನೆನಪಿಗಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ) ಸುಳ್ಯ ಇದರ ವತಿಯಿಂದ ನಡೆದ ಕೆವಿಜಿ ಸಾಧನೆ ಸಂಸ್ಮರಣೆ ಕಾರ್ಯಕ್ರಮ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಮಲ್ನಾಡು ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೋಡಿಯಾಲ ಬೈಲು ಸುಳ್ಯ ಇದರ ಸಂಚಾಲಕ ದೊಡ್ಡಣ್ಣ ಬರೆಮೇಲು ಇವರು ಅಮರ ಸುಳ್ಯದ ಶಿಲ್ಪಿ ಕುರುಂಜಿ ವೆಂಕಟರಮಣ ಗೌಡರ ಜೀವನ, ಪರೋಪಕಾರ, ಸಾಧನೆಗಳ ಬಗ್ಗೆ ಸವಿವರವಾಗಿ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ತಿಳಿ ಹೇಳಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಶಾಲಾ ವಿದ್ಯಾರ್ಥಿನಿಯಾದ ಕುಮಾರಿ ಅನನ್ಯ ಎಚ್. ಕುರುಂಜಿ ವೆಂಕಟರಮಣ ಗೌಡರ ಸಾಧನೆ ಬಗ್ಗೆ ಮಾತನಾಡಿದರು.
ಜ್ಞಾನದೀಪ ಶಾಲಾ ಸಂಚಾಲಕ ಎ.ವಿ.ತೀರ್ಥರಾಮ ಅಧ್ಯಕ್ಷತೆ ವಹಿಸಿದ್ದರು.
ಕೆವಿಜಿ ಅವರ ಜಯಂತ್ಯೋತ್ಸವದ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅನನ್ಯ. ಎಚ್.ಹಾಗೂ ದ್ವಿತೀಯ ಸ್ಥಾನ ಪಡೆದ ಪೂರ್ವಿ.ಎಂ.ರೈ ಇವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ಸ್ವಾಗತಿಸಿ, ಶಾಲಾ ಸಹ ಶಿಕ್ಷಕ ಪುನೀತ್ ರವಿ ವಂದಿಸಿದರು.
ಶಾಲಾ ಶಿಕ್ಷಕಿ ಶ್ರೀಮತಿ ರೇಖಾ ಇವರು ಕಾರ್ಯಕ್ರಮ ನಿರೂಪಿಸಿದರು.