ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2023-24ರ ವಾರ್ಷಿಕ ಕ್ರೀಡೋತ್ಸವ

0

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2023-24ರ ವಾರ್ಷಿಕ ಕ್ರೀಡೋತ್ಸವ ನಡೆಯಿತು.

ಕೆ.ಜಿ ಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ವಿವಿಧ ಉಪಘಟಕಗಳ ನಾಯಕರು ಪ್ರತಿಜ್ಞಾವಿಧಿಯನ್ನು ಕೈಗೊಳ್ಳುವುದರ ಮೂಲಕ ಉದ್ಘಾಟಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ಕ್ರೀಡೆಗಳು ಶಾರೀರಿಕವಾಗಿ ಬೆಳೆಯಲು ಸಹಕಾರಿಯಾಗುವುದಲ್ಲದೆ ಆರೋಗ್ಯ ಆಯುಷ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳ ಕ್ರೀಡೋತ್ಸವಕ್ಕೆ ಶುಭ ಹಾರೈಸಿದರು.


ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗದಂತಿರಬೇಕು ಎಂದು ನುಡಿದ ಶಾಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ವಿದ್ಯಾರ್ಥಿಗಳ ಕ್ರೀಡೋತ್ಸವಕ್ಕೆ ಶುಭ ಆಶಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಿವಪ್ರಸಾದ್ ಹೊಸೂರು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಯು ಅತಿ ಅವಶ್ಯಕ ಬಹುಮಾನಗಳು ಬರಲಿ ಬರದೆ ಇರಲಿ ಪಾಲ್ಗೊಳ್ಳುವಿಕೆಯು ಅತಿ ಅವಶ್ಯಕ ಪಾಲ್ಗೊಳ್ಳುವಿಕೆಯು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ ಎಂದರು.


ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬುಸಾಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಪ್ರೋತ್ಸಾಹಿಸಿದರು. ಜೊತೆಗೆ ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಕಾರ್ಯಕ್ರಮದ ಕೊನೆಯವರೆಗೆ ಇದ್ದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.


ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಹುರುಪಿನಿಂದ ಸ್ಪ
ರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಾಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬುಸಾಲಿ ಹಾಗೂ ಸದಸ್ಯರು ವಿದ್ಯಾರ್ಥಿಗಳು ,ಶಿಕ್ಷಕ , ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.