ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕೆವಿಜಿ ಸಾಧನೆ -ಸಂಸ್ಮರಣೆ ಕಾರ್ಯಕ್ರಮ

0

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಕೆ.ವಿ.ಜಿ ಸಾಧನೆ – ಸಂಸ್ಮರಣೆ ಕಾರ್ಯಕ್ರಮ ಮತ್ತು ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಕಾರ್ಯಕ್ರಮವು ಶನಿವಾರ ನಡೆಯಿತು.


ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿ.ಎಚ್. ಅಬ್ದುಲ್ ಖಾದರ್ ಅವರು ಕೆ.ವಿ.ಜಿ‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಅವರ ಸಭಾಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಳ್ಯ ಎನ್ನೆಂಸಿಯ ಉಪನ್ಯಾಸಕಿ ರೇಷ್ಮಾ ದೇವರಗುಂಡ ಡಾ. ಕೆ.ವಿ.ಜಿ. ಯವರ ಸಾಧನೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಕಾರ್ಯಕ್ರಮದ ನಿರ್ದೇಶಕರಾದ ಶರತ್ ಅಡ್ಕಾರು ಉಪಸ್ಥಿತರಿದ್ದರು.

ಇದೇ ವೇಳೆ ಡಾ. ಕೆವಿಜಿ ಸಾಧನೆಯ ಕುರಿತು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಫಾತಿಮತ್ ಸೈಬಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಹಮ್ಮದ್ ಬಾಸಿಲ್ ಇವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಮೀನಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.