ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆ ಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

0

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆ ಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ. 18 ರಂದು ನಡೆಯಿತು. ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಕ್ರೀಡಾ ಜ್ಯೋತಿಯಿಂದ ದೀಪ ಪ್ರಜ್ವಲಿಸುವ ಮೂಲಕ ವಾರ್ಷಿಕ ಕ್ರೀಡಾ ಸ್ಪರ್ಧೆಗಳಿಗೆ ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ ಚಾಲನೆಯನ್ನು ನೀಡಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿ,ಮಾತನಾಡಿದರು.


ಪ್ರಾಾಥಮಿಕ ಶಾಲಾ ಪೋಷಕ ಸಮಿತಿ ಅಧ್ಯಕ್ಷ ಜೆ.ಕೆ ರೈ, ಪ್ರೌಢಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಗುರುಸ್ವಾಮಿ ಬಿ. ಜಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ, ಉಪಸ್ಥಿತರಿದ್ದು ಶುಭ ಕೋರಿದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಣೀಯ ಪಥ ಸಂಚಲನ ಮೂಡಿ ಬಂತು. ಪ್ರೌಢಶಾಲಾ ಕ್ರೀಡಾ ಮಂತ್ರಿ ಮಹಮ್ಮದ್ ಪೈಜ್ 9ನೇ, ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಪ್ರೌಢಶಾಲಾ ಕ್ರೀಡಾ ಮಂತ್ರಿ ಅನ್ವಿತಾ 9ನೇ ಸ್ವಾಗತಿಸಿ, ಪ್ರಾಥಮಿಕ ಶಾಲಾ ಕ್ರೀಡಾ ಮಂತ್ರಿ ವೈಷ್ಣವಿ 7ನೇ, ವಂದಿಸಿ, ಮರಿಯಂ ಹುದಾ ಹಾಗೂ ಮನ್ವಿತಾ 9ನೇ ತರಗತಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಹುದೇರಿ, ಉಮೇಶ್ ಪಂಜದಬೈಲು ಹಾಗೂ ಶಿಕ್ಷಕರು ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದರು. ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ, ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಈರಯ್ಯ ದೂoತೂರು ಆಗಮಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು. ಸುಮಾರು 760 ವಿಜೇತ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದರು.