ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

0

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು.
ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು.
ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.


ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ ವಿಕ್ಟರ್ ಡಿಸೋಜ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ನಗರ ಪಂಚಾಯತ್ ಸದಸ್ಯ ಡೇವಿಡ್ ದೀರಾ ಕ್ರಾಸ್ತ,ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೊ,ಕಾರ್ಯದರ್ಶಿ ಜೂಲಿಯಾನ ಕ್ರಾಸ್ತ,ಪೊಷಕ ಸಮಿತಿ ಅಧ್ಯಕ್ಷರುಗಳಾದ ಜೆಕೆ ರೈ,ಶ್ರೀಮತಿ ಭವ್ಯ, ಸೈಂಟ್ ಬ್ರಿಜಿಡ್ಸ್ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅಂತೋನಿ ಮೇರಿ ,ಮೊದಲಾದವರು ಉಪಸ್ಥಿತರಿದ್ದರು.
ಸೈಂಟ್ ಜೋಸೆಫ್ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ವಾರ್ಷಿಕ ವರದಿ ವಾಚಿಸಿದರು.


ಶಿಕ್ಷಕಿ ಪ್ರೆಸಿಲ್ಲಾ ಸ್ವಾಗತಿಸಿದರು.