ಡಿ.30: ಸೋಣಂಗೇರಿ ಶಾಲಾ ವಾರ್ಷಿಕೋತ್ಸವ

0

ಜಾಲ್ಸೂರು ಗ್ರಾಮದ ಸೋಣಂಗೇರಿ ಸ.ಹಿ.ಪ್ರಾ.ಶಾಲೆ ಮತ್ತು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವವು
ಡಿ.30ರಂದು ಶಾಲೆಯ ಸುವರ್ಣ ಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ ಶಾಲಾ ಧ್ವಜಾರೋಹಣವಾದ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಂಥಾಲಯ ನೌಕರರ ಸಂಘದ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಪ್ರಧಾನ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್. ಅರ್ಭಡ್ಕ, ಗ್ರಾ.ಪಂ.ಸದಸ್ಯರುಗಳಾದ ಈಶ್ವರ ನಾಯ್ಕ ಸೋಣಂಗೇರಿ, ಶಿವಪ್ರಸಾದ್ ನೀರಬಸಿರು, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ಬಿ.ಈ.., ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್, ಶ್ರೀನಿವಾಸ ಕಾಲೇಜು ಫಾರ್ಮಸಿ ಬೆಂಗಳೂರಿನ ಪ್ರೊಫೆಸರ್ ಡಾ. ಕುಮಾರ್ ಪ್ರಸಾದ್ ಎಸ್.ಎ.,
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿ.ಸಿ. ಟ್ರಸ್ಟ್ ನ ಯೋಜನಾಧಿಕಾರಿ ನಾಗೇಶ್ ಪಿ, ನಿವೃತ್ತ ಪ್ರಾಂಶುಪಾಲ ಗೌರಿ ಶಂಕರ್ ಹೊಸಗದ್ದೆ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅನುರಾಧ ಭಾಗವಹಿಸಲಿದ್ದಾರೆ.

ಬಳಿಕ ಬಹುಮಾನ ವಿತರಣೆ, ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.