ಸುಳ್ಯ ಜೂನಿಯರ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ : ಗಣಿತ ಹಬ್ಬ

0

ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದೊಂದಿಗೆ ಶ್ರೀನಿವಾಸ ರಾಮಾನುಜಂ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ “ಗಣಿತ ಹಬ್ಬ- 2023” ಕಾರ್ಯಕ್ರಮ ಸುಳ್ಯ ಜೂನಿಯರ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ಡಯಟ್ ಪ್ರಾಂಶುಪಾಲರಾದ ರಾಜಲಕ್ಷ್ಮಿ ಉದ್ಘಾಟಿಸಿ, ಗಣಿತ ಹಬ್ಬ ಎಂಬ ಹೆಸರಿನಲ್ಲಿ ಮಾಡುವ ಕಾರ್ಯಕ್ರಮದ ಮೂಲಕ ಗಣಿತಕ್ಕೆ ಹೊಸ ಹುರುಪನ್ನು ತಂದ ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಕೆಲಸ ಶ್ಲಾಘನೀಯ. ಇನ್ಮುಂದೆ ಇಂತಹ ಗಣಿತ ಕಾರ್ಯಕ್ರಮ ಬೇರೆ ಬೇರೆ ಶಾಲೆಗಳಲ್ಲಿ, ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ನಡೆಯುವಂತಾಗಲಿ ಎಂದರು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ,ಜೂನಿಯರ್ ಕಾಲೇಜು ಉಪ ಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ , ಗಣಿತ ಶಿಕ್ಷಕಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.

ಗಣಿತ ಕೇಂದ್ರದ ಅಧ್ಯಕ್ಷ ಎಂ.ಬಿ. ಸದಾಶಿವ ಅಧ್ಯಕ್ಷತೆ ವಹಿಸಿದ್ದರು.
ಕೆವಿಜಿ ತಾಂತ್ರಿಕ ಮಹಾವಿದ್ಯಾಲಯದ ಉಪ ಗಣಿತ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಧರ ಕೆ ಗಣಿತದ ವಿಶೇಷ ಭಾಷಣ ನೀಡಿದರು.
ಎನ್ ಎ ಜ್ಞಾನೇಶ್ ಸ್ವಾಗತಿಸಿ ಹಿರಿಯ ಗಣಿತ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.