ದೇವಚಳ್ಳ ಶಾಲಾ ವಾರ್ಷಿಕೋತ್ಸವ

0


ಪ್ರಾಥಮಿಕ ಶಾಲಾ ಶಿಕ್ಷಣ ಭವಿಷ್ಯಕ್ಕೆ ಅಡಿಪಾಯ : ಭಾಗೀರಥಿ ಮುರುಳ್ಯ


ಶಾಲಾ ಶಿಕ್ಷಣ ಇಲಾಖೆ, ದ.ಕ. ಜಿ.ಪಂ., ಹಿ.ಪ್ರಾ.ಶಾಲೆ ದೇವಚಳ್ಳ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ಶಾಲಾ ವಾರ್ಷಿಕೋತ್ಸವವು ಡಿ. ೨೧ರಂದು ನಡೆಯಿತು.
ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಣವು ಭವಿಷ್ಯಕ್ಕೆ ಅಡಿಪಾಯವಾಗಿದ್ದು, ಮಕ್ಕಳು ಈ ಕುರಿತು ಚಿಂತಿಸಿ ಅಧ್ಯಯನ ನಡೆಸಬೇಕು. ನೈತಿಕ ಶಿಕ್ಷಣದ ತಳಹದಿ ಭವಿಷ್ಯಕ್ಕೆ ಅಗತ್ಯ ಎಂದು ಹೇಳಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಸೇವಾಜೆ, ಸದಸ್ಯೆ ಶ್ರೀಮತಿ ಪ್ರೇಮಲತಾ ಕೇರ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷ ಧನಂಜಯಕುಮಾರ್ ಕೆ., ದೇವಚಳ್ಳ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ. ತೀರ್ಥರಾಮ, ಮಾಜಿ ಜಿ.ಪಂ. ಸದಸ್ಯ ಭರತ್ ಮುಂಡೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ. ರಮೇಶ್, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ, ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ ಭಾಗವಹಿಸಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆ. ಪ್ರಸ್ತಾವನೆಗೈದರು. ಕಿರಣ್ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ.ವಿ., ಶಾಲಾ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್, ಶಾಲಾ ವಿದ್ಯಾರ್ಥಿ ನಾಯಕ ಗೌತಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯರವರನ್ನೂ ಸನ್ಮಾನಿಸಲಾಯಿತು.