ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣಿತ ದಿನಾಚರಣೆ

0


ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕದಲ್ಲಿ ಗಣಿತ ದಿನಾಚರಣೆಯ ಪ್ರಯುಕ್ತ ವಿವಿಧ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿವಿಧ ಬಗೆಯ ಗಣಿತ ಮಾದರಿಗಳನ್ನು ಪ್ರದರ್ಶಿಸಲಾಯಿತು.

ಗುಣಿಸುವ, ಭಾಗಿಸುವ, ಕಳೆಯುವ, ಆಕೃತಿಗಳ ಮಾದರಿ, ಲ.ಸಾ.ಅ ಮತ್ತು ಮ.ಸಾ.ಅ ಮಾದರಿ, ಭಿನ್ನರಾಶಿ, ಅಳತೆ ಮತ್ತು ಗ್ರಾಫ್ಗಳ ಮಾದರಿ ಹೀಗೆ ಮುಂತಾದ ಹಲವು ರೀತಿಯ ಮಾದರಿಗಳನ್ನು ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರುಕ್ಮಯ್ಯ ದಾಸ್ ಅವರು ಬೀಜಗಣಿತದ ಸೂತ್ರವನ್ನು ಮಾದರಿ ಮೂಲಕ ತೋರ್ಪಡಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರದ ಶೋಭಾ ಕಿಶೋರ್ ಗಣಿತ ದಿನಾಚರಣೆಯ ಮಹತ್ವವನ್ನು ಮತ್ತು ಸೊನ್ನೆಯ ಆವಿಷ್ಕಾರವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಜೊತೆಗೆ ವಿದ್ಯಾರ್ಥಿಗಳ ಮಾದರಿಗಳನ್ನು ಗಮನಿಸಿ ವಿದ್ಯಾರ್ಥಿಗಳಲ್ಲಿ ಇನ್ನೂ ಹೆಚ್ಚಿನ ಕ್ರಿಯಾಶೀಲ ಮಾದರಿಗಳು ಹೊರಹೊಮ್ಮಲಿ ಎಂದು ಆಶಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮತ್ತು ಸದಸ್ಯರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕಿ ಶ್ರೀಮತಿ ನವ್ಯ ನಿರೂಪಿಸಿ ವಂದಿಸಿದರು.