ಡಿ. 26: ಡಾ. ಕುರುಂಜಿ ವೆಂಕಟ್ರಮಣ ಗೌಡರ 95 ನೇ‌ ಹುಟ್ಟುಹಬ್ಬ – ಫೌಂಡರ್ಸ್ ಡೇ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 95 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆಯನ್ನಾಗಿ ಡಿ. 26ರಂದು ಆಚರಿಸಲಾಗುತ್ತಿದೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ. ಕೆ.ವಿ.ಜಿ.ಯವರ ಪುತ್ಥಳಿಗೆ ಹಾರಾರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರು, ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು ಭಾಗವಹಿಸಿದ್ದಾರೆ ಎಂದು ಸ್ಥಾಪಕರ‌ ದಿನಾಚರಣೆ ಕಮಿಟಿ ಪ್ರಧಾನ ಕಾರ್ಯದರ್ಶಿ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ತಿಳಿಸಿದ್ದಾರೆ.