ಜಾಲ್ಸೂರು ಗ್ರಾಮದ ಕದಿಕಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವವು ಡಿ.28ರಂದು ಜರುಗಲಿದೆ.
ಬೆಳಿಗ್ಗೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಸುಜಾತ ಬೇರ್ಪಡ್ಕ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಶಾಲಾ ಕೊಠಡಿಯನ್ನು ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್., ಗ್ರಾ.ಪಂ. ಸದಸ್ಯರುಗಳಾದ ಕೆ.ಎಂ. ಬಾಬು ಕದಿಕಡ್ಕ, ಎನ್.ಎಂ. ಸತೀಶ ಕೆಮನಬಳ್ಳಿ, ಪಿ.ಆರ್.ಸಂದೀಪ್ ಕದಿಕಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ., ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರುಕ್ಕು, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅನುರಾಧ ಎ.ಆರ್., ಪಯಸ್ವಿನಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲತಾ, ಶ್ರೀ. ಕ್ಷೇ. ಧ.ಗ್ರಾ.ಯೋಜನಾಧಿಕಾರಿ ನಾಗೇಶ್, ಶಾಲಾ ಸ್ಥಳದಾನಿ ಜಯರಾಮ ರೈ ಜಾಲ್ಸೂರು, ಶಾಲಾ ಸ್ಥಾಪಕಾಧ್ಯಕ್ಷರ ಪುತ್ರ ಐ.ಕೆ. ಹೇಮಚಂದ್ರ ಕದಿಕಡ್ಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಿ.ಎಚ್. ಉಪಸ್ಥಿತರಿರಲಿದ್ದಾರೆ. ಸಂಜೆ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಮತ್ತು ಯಕ್ಷಗಾನ ಪ್ರಸಂಗ ಶ್ರೀಕೃಷ್ಣ ಲೀಲೆ, ಕಂಸವಧೆ ಜರುಗಲಿದೆ.