ದರ್ಖಾಸ್ತು ಸ.ಹಿ.ಪ್ರಾ.‌ಶಾಲಾ ವಾರ್ಷಿಕೋತ್ಸವ

0

ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇದರ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಡಿ. 23ರಂದು ನಡೆಯಿತು.

ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ‌ ನಮಿತಾ ಎಲ್. ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿ.ಪಂ. ಸದಸ್ಯೆ ಶ್ರೀಮತಿ ರಾಜೀವಿ ಆರ್.ರೈ ಕಾರ್ಯಕ್ರಮ ಉದ್ಘಾಟಿಸಿದರು.

ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಪ್ರಧಾನ ಭಾಷಣ ಮಾಡಿದರು.
ಗ್ರಾ.ಪಂ. ಸದಸ್ಯ ಅನಿಲ್ ರೈ ಪುಡ್ಕಜೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಟರಾಜ್, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಸ್ವಾಗತಿಸಿ, ವರದಿ ವಾಚನ ಗೈದರು. ಶಿಕ್ಷಕಿ ಶ್ರೀಮತಿ ಪ್ರೇಮಾ ಆರ್. ಕಾರ್ಯಕ್ರಮ ನಿರೂಪಿಸಿದರು.
ತಮ್ಮ ಗ್ರಾಮ ಪಂಚಾಯತ್ ನಿಧಿಯಿಂದ ಟೈಲ್ಸ್ ಅಳವಡಿಸಿದ ಅನಿಲ್ ರೈ ಪುಡ್ಕಜೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.