ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯ ಶಾಲಾ ವಾರ್ಷಿಕೋತ್ಸವವನ್ನು ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ, ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಮೊದಲಾದ ಸಂಘ ಸಂಸ್ಥೆಗಳ ಜೊತೆಗೂಡಿ ಡಿ.23 ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯಕುಮಾರ್ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಮುಕ್ಕೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್. ವಾರ್ಷಿಕ ವರದಿ ವಾಚನ ಮಾಡಿದರು. ಶಿಕ್ಷಕಿಯಾದ ಶ್ರೀಮತಿ ಶೃತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.‌

ಶಿಕ್ಷಕಿಯರಾದ ಶ್ರೀಮತಿ ಲೀನಾ ಹಾಗೂ ಶ್ರೀಮತಿ ಅಶ್ವಿತಾ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕಿಯಾದ ಶ್ರೀಮತಿ ರತ್ನಾವತಿ ಬಿ ದತ್ತಿನಿಧಿ ವಿತರಣಾ ಕಾರ್ಯಕ್ರಮ ಹಾಗೂ ಧನ್ಯವಾದ ಸಮರ್ಪಣೆ ನಿರ್ವಹಿಸಿದರು. ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶಹಿನಾಝ್, ಪೆರುವಾಜೆ ಗ್ರಾಮ ಪಂಚಾಯತ್ ನ ಸದಸ್ಯರಾದ ಪದ್ಮನಾಭ ಶೆಟ್ಟಿ, ಮಾಧವ , ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಮಾನ್ಯ ನಿರ್ದೇಶಕರಾದ ಪ್ರವೀಣ್ ಕುಮಾರ್, ಅಕ್ರಮ ಸಕ್ರಮ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರದ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಉಮೇಶ್, ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ಪುರುಷೋತ್ತಮ ಕೆ , ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ ಕುಮಾರಿ, ವಿದ್ಯಾರ್ಥಿ ನಾಯಕ ಮಾಸ್ಟರ್ ದೀಪಕ್ , ಎಸ್ .ಡಿ .ಎಂ .ಸಿ ಸದಸ್ಯರು, ಪೋಷಕರು , ಅಡುಗೆ ಸಿಬ್ಬಂದಿಗಳು , ಭಾವೈಕ್ಯ ಯುವಕ ಮಂಡಲದ ಸದಸ್ಯರು , ಭಾವೈಕ್ಯ ಮಹಿಳಾ ಮಂಡಲದ ಸದಸ್ಯರು, ಭಾವೈಕ್ಯ ಚಿಗುರು ವೇದಿಕೆ ಸದಸ್ಯರು ಉಪಸ್ಥಿತರಿದ್ದರು