ಸರಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ – ಮಾಹಿತಿ ಕಾರ್ಯಾಗಾರ

0

ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವರಿಂದ ರಕ್ತದಾನ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕ, ತಾಲೂಕು ಕಚೇರಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು.

ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಅಧ್ಯಕ್ಷತೆ ವಹಿಸಿದ್ದರು.

ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

ತಹಶೀಲ್ದಾರ್ ಮಂಜುನಾಥ್ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ತಾ.ಪಂ. ಇ.ಒ. ರಾಜಣ್ಣ, ರೆಡ್ ಕ್ರಾಸ್ ಉಪ ಸಭಾಪತಿ ಕೆ.ಎಂ.ಮುಸ್ತಫಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಭಾಪತಿ ಪಿ.ಬಿ.ಸುಧಾಕರ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ರಕ್ತದಾನದ ಮಹತ್ವ ವಿವರಿಸಿದರು.

ಇದೆ ಸಂದರ್ಭ ರೆಡ್ ಕ್ರಾಸ್ ಮಂಗಳೂರಿನ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಧನಲಕ್ಷ್ಮಿ ಕುದ್ಪಾಜೆ ಪ್ರಾರ್ಥಿಸಿದರು. ಪಶು ಸಂಗೋಪನಾ ಇಲಾಖಾಧಿಕಾರಿ ಡಾ.ನಿತಿನ್ ಪ್ರಭು ಸ್ವಾಗತಿಸಿ, ಶಿಕ್ಷಕಿ ಎ.ಜಿ. ಭವಾನಿ ವಂದಿಸಿದರು.

ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ತಹಸೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯತ್ ಇ. ಓ. ರಾಜಣ್ಣ ಸೇರಿದಂತೆ ಹಲವರು ಮಂದಿ ರಕ್ತದಾನ ಮಾಡಿದರು.