ಅಪರಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ.ಫಾ. ವಿಕ್ಟರ್ ಡಿ’ಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕವಿತಾ ಎಂ.ಕೆ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಲೆ ಡಾ. ಯಶೋಧ ರಾಮಚಂದ್ರ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕಿ ಅಭಿಜ್ಞ ಅತಿಥಿಯನ್ನು ಪರಿಚಯಿಸಿದರು.
ರೆ.ಫಾ. ವಿಕ್ಟರ್ ಡಿ’ಸೋಜರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲ ದೀಪಕ್ ವೈ.ಆರ್ ಸ್ವಾಗತಿಸಿದರು. ಉಪನ್ಯಾಸಕಿ ಮಲ್ಲಿಕಾ ಎಂ.ಎಲ್, ವಿದ್ಯಾರ್ಥಿಗಳಾದ ಪ್ರಥಮ್ ಶೇಖರ್, ಪ್ರತಿಜ್ಞಾ ಬಿ.ಎಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪೋಷಕರು, ವಿವಿಧ ವಿದ್ಯಾಸಂಸ್ಥೆಗಳ ಮುಖ್ಯಸ್ಥ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಪೋಷಕರು ತಮ್ಮ ವಿದ್ಯಾರ್ಥಿಗಳನ್ನು ಈ ವಿದ್ಯಾಸಂಸ್ಥೆಗೆ ಸೇರಿಸಿರುವುದು ಅತ್ಯಂತ ಒಳ್ಳೆಯ ಕೆಲಸ. ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಿದೆ. ಒಳ್ಳೆಯ ಉಪನ್ಯಾಸಕರ ತಂಡ ಇದೆ. ವಿದ್ಯಾರ್ಥಿ ಜೀವನವು ಅತ್ಯಂತ ಶ್ರೇಷ್ಠವಾದದ್ದು. ಈ ಪ್ರಾಯದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ನಿಮ್ಮ ಪೋಷಕರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿ. ಅವರ ಕನಸನ್ನು ನನಸಾಗಿಸಿ – ರೆ.ಫಾ. ವಿಕ್ಟರ್ ಡಿ’ಸೋಜ