ವಸಂತ ಶೆಟ್ಟಿ ಬೆಳ್ಳಾಯವರ ಮುಂದಾಳತ್ವದಲ್ಲಿ ಮುನ್ನಡೆಯುತ್ತಿರುವ ಕಳಂಜ ಗ್ರಾಮದ ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ವೈಭವ, ಸಾಧಕರಿಗೆ ಸನ್ಮಾನ ಮತ್ತು ಯಕ್ಷಗಾನ ಬಯಲಾಟ ಇಂದು ನಡೆಯಲಿದೆ. ಆರಂಭದಲ್ಲಿ ದೆಹಲಿ ಮತ್ತು ಶ್ರೀನಗರದಲ್ಲಿ ನಿನಾದ ಕಲಾವಿದರು ಪ್ರಸ್ತುತಪಡಿಸಿದ ಪಜ್ಜೆ ಗೆಜ್ಜೆ ನೃತ್ಯ ಕಾರ್ಯಕ್ರಮ ನಡೆಯಿತು.
ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಣ ರಾಮಕೃಷ್ಣ ಭಟ್ ಚೂಂತಾರು ಮತ್ತು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಶಿಕ್ಷಕ ಉದಯಕುಮಾರ್ ರೈ ಶೇಣಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ಉದ್ಯಮಿ ಶಶಿಧರ ಶೆಟ್ಟಿ ಬರೋಡ ಭಾಗವಹಿಸಲಿದ್ದಾರೆ. ಬಳಿಕ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಶ್ರೀಹರಿ ದರ್ಶನ ಯಕ್ಷಗಾನ ಬಯಲಾಟ ನಡೆಯಲಿದೆ. ನೃತ್ಯ ವೈಭವ ಕಾರ್ಯಕ್ರಮವನ್ನು ಪ್ರಗತಿ ಪ್ರೌಢಶಾಲಾ ಶಿಕ್ಷಕಿ ವಿನಯ ರೈ ನಿರೂಪಿಸಿದರು.