ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಗ್ರೀನ್ ವ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಇಂದು ನಡೆದಿದ್ದು,
ಸುಳ್ಯ ತಾಲೂಕು ಕ್ರೀಡಾಧಿಕಾರಿಗಳು ಹಾಗೂ ಐವರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರೂ ಆದ ಸೂಫಿ ಪೆರಾಜೆಯವರು ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಕ್ರೀಡಾ ಪ್ರಮಾಣ ವಚನವನ್ನು ಶಾಲಾ ಸಂಚಾಲಕ ಎಸ್.ಎಂ. ಅಬ್ದುಲ್ ಹಮೀದ್ ಹಾಗೂ ಸಹ ಶಿಕ್ಷಕಿ ರೇಶ್ಮಾ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಂ.ಅಬ್ದುಲ್ ಮಜೀದ್ ಕ್ರೀಡಾ ಧ್ವಜಾರೋಹಣಗೈದರು.
ಆರಂಭದಲ್ಲಿ ನಾಲ್ಕು ತಂಡಗಳ ವರ್ಣರಂಜಿತ ಪಥಸಂಚಲನದಲ್ಲಿ ಅವರು ಗೌರವ ವಂದನೆ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕ್ರೀಡಾ ಗಿಡಕ್ಕೆ ಮೀಫ್ ಉಪಾಧ್ಯಕ್ಷ ಕೆ.ಎಂ.ಮುಸ್ತಾಫಾ ನೀರುಣಿಸಿದರು.
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಶಾಲಾ ಫುಟ್ಬಾಲ್ ತಂಡದ ಸದಸ್ಯರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಹರ್ಲಡ್ಕ ಸ್ಮರಣಿಕೆ ನೀಡಿ ಗೌರವಿಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎ.ಅಬ್ದುಲ್ಲಾ ನಾವೂರು, ಆದಳಿತ ಮಂಡಳಿ ನಿರ್ದೇಶಕರುಗಳಾದ ಕೆ.ಬಿ.ಇಬ್ರಾಹಿಂ, ಮಾಜಿ ಸಂಚಾಲಕ ಕೆ.ಎಂ.ಮೊಹಿಯುದ್ದೀನ್, ಕೋಶಾಧಿಕಾರಿ ಆದಂ ಹಾಜಿ ಕಮ್ಮಾಡಿ, ಪಿಟಿಎ ನಿರ್ದೇಶಕರುಗಳಾದ ಸಿದ್ದಿಕ್ ಕಟ್ಟೆಕಾರ್, ಶ್ರೀಮತಿ ತಾಹಿರಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಸ್ವಾಗತಿಸಿ, ಸಹಶಿಕ್ಷಕಿ ಅಶ್ವಿನಿ ವಂದಿಸಿದರು.
ಶಿಕ್ಷಕ ರಂಜಿತ್ ಕಾರ್ಯಕ್ರಮ ನಿರೂಪಿಸಿದರು,
ಶಿಕ್ಷಕ ಮಂಜುನಾಥ್ ಮತ್ತು ದೈಹಿಕ ಶಿಕ್ಷಕಿ ಶ್ರೀಮತಿ ಭವ್ಯ ಸಹಕರಿಸಿದರು.