ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ

0

ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತಿ

ದ‌.ಕ. ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.31ರಂದು ಸಂಜೆ ಜರುಗಿತು.

ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ವಿದ್ಯಾಸಂಸ್ಥೆ ಅಧ್ಯಕ್ಷ ಜಿ. ರಾಮಚಂದ್ರ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಗ್ರಾ.ಪಂ. ಸದಸ್ಯರಾದ ಶ್ರೀಮತಿ ಲಿಸ್ಸಿ ಮೊನಾಲಿಸಾ, , ಶ್ರೀ. ಕ್ಷೇ.ಧ.ಗ್ರಾ.ಯೋಜನಾಧಿಕಾರಿ ನಾಗೇಶ್ ಗೌಡ, ಗೂನಡ್ಕ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ಅರಂತೋಡು – ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಕೊಳ್ತಿಗೆ ರೈತಮಿತ್ರ ಕೂಟದ ಅಧ್ಯಕ್ಷ ಮುರಳೀಧರ ಎಸ್.ಪಿ., ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್. ಯೋಗೀಶ್ವರ, ಉಪ ವಲಯಾರಣ್ಯಾಧಿಕಾರಿ ಚಂದ್ರು ಬಿ.ಜೆ., ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್ ಕೆ., ನೋಟರಿ ವಕೀಲರಾದ ಪುಂಡರೀಕ ಪಿ.ಎ., ನಿವೃತ್ತ ಸೈನಿಕರುಗಳಾದ ನವೀನ್ ಇರ್ಣೆ, ಲಕ್ಷ್ಮೀನಾರಾಯಣ ಯು.ಆರ್., ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು‌‌.ಬಿ. ಚಕ್ರಪಾಣಿ, ಸಂಪಾಜೆ ಸಹಕಾರಿ ಸಂಘದ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋದ ನಿರ್ಮಲಚಂದ್ರ , ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಅಬೂಬಕ್ಕರ್ ಸಿದ್ಧೀಕ್, ಅಲ್ – ಅಮೀನ್ ಅಸೋಸಿಯೇಷನ್ ಅಧ್ಯಕ್ಷ ಜಾಫರ್ ಸಾಧಿಕ್ , ಶಾಲಾ ಮುಖ್ಯೋಪಾಧ್ಯಾಯ ಹನುಮಂತಪ್ಪ ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು. ಬಳಿಕ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ -ಸಾಹಿತ್ಯ ಸಂಭ್ರಮ ಜರುಗಿತು.