ಸರಕಾರಿ ಹಿ.ಪ್ರಾ.ಶಾಲೆ ಮಡಪ್ಪಾಡಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಅಂಗನವಾಡಿ ಕೇಂದ್ರ ಮಡಪ್ಪಾಡಿ ಮತ್ತು ಹಿರಿಯ ವಿದ್ಯಾರ್ಥಿ ಗಳ ಸಂಘ ಮಡಪ್ಪಾಡಿ ಹಾಗೂ ಊರಿನ ವಿದ್ಯಾಭಿಮಾನಿಗಳ ಸಹಭಾಗಿತ್ವ ದಲ್ಲಿ ಕ್ರೀಡೋತ್ಸವವು ಡಿ.24ರಂದು ಮತ್ತು ವಾರ್ಷಿಕೋತ್ಸವವು ಡಿ.30ರಂದು ನಡೆಯಿತು.
ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ನೆರವೇರಿಸಿದರು. ಅಧ್ಯಕ್ಷತೆಯನ್ನು ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್ ವಹಿಸಿದ್ದರು.
ಮುಖ್ಯ ಅಥಿತಿಗಳಾಗಿ ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎ.ಪಿ.ಎಂ.ಸಿ.ಯ ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಚಿನ್ ಬಳ್ಳಡ್ಕ, ಹಿರಿಯ. ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮಪಾಲ ತಳೂರು, ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ದುಶ್ಯಾಂತ್ ಶೀರಡ್ಕ, ಸುಳ್ಯ ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಲೋಹಿತ್ ಬಾಳಿಕ್ಕಳ, ಉಜ್ವಲ ಮಹಿಳಾ ಮಂಡಲದ ಅಧ್ಯಕ್ಷೆ ಶಕುಂತಲಾ ಕೇವಳ, ಗ್ರಾ.ಪಂ.ಉಪಾಧ್ಯಕ್ಷೆ ಸುಜಾತ ಹಾಡಿಕಲ್ಲು, ಸದಸ್ಯರಾದ ಮಿತ್ರದೇವ ಮಡಪ್ಪಾಡಿ, ಜಯರಾಮ ಹಾಡಿಕಲ್ಲು, ಶರ್ಮಿಳಾ ಕಜೆ, ಶಾಲಾ ವಿದ್ಯಾರ್ಥಿ ನಾಯಕಿ ಬೃಂದಾ ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಬಾಲಕೃಷ್ಣ ನಾಯರ್ ನೀರಬಿದಿರೆ ಯವರನ್ನು ಸನ್ಮಾನಿಸಲಾಯಿತು. ಮುಖ್ಯೋಪಾಧ್ಯಾಯರು ವರದಿ ಮಂಡಿಸಿದರು. ಶಿಕ್ಷಕ ಕುಶಾಲಪ್ಪ ಪಾರೆಪ್ಪಾಡಿ ಸ್ವಾಗತಿಸಿದರು. ಜಯಲತಾ ಜಯರಾಮ ವಂದಿಸಿದರು. ರಂಜಿತ್ ಶೀರಡ್ಕ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಅಂಗನವಾಡಿ ಪುಟಾಣಿಗಳಿಂದ, ಶಾಲಾ ಮಕ್ಕಳಿಂದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶಿವಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.