ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

0

ಕೊಡಗು ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ ಇಂದು ಕಾಲೇಜಿನ ನಿಸರ್ಗ ರಂಗ ವೇದಿಕೆಯಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆ ಯನ್ನು ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ನೆರವೇರಿಸಿದರು.ಧ್ವಜಾರೋಹಣವನ್ನು ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ ಎ.ಪಿ.ಸುಮತಿಯವರ ಬೀಳ್ಕೊಡುಗೆ ಹಾಗೂ ಸನ್ಮಾನ ನೆರವೇರಿತು.ಆಡಳಿತ ಮಂಡಳಿ ಮತ್ತು ಸಹೋದ್ಯೋಗಿಗಳ ಪರವಾಗಿ ಫಲಪುಷ್ಪ, ಶಾಲು, ಹಾರ ಮತ್ತು ಚಿನ್ನದ ಉಡುಗೊರೆಯೊಂದಿಗೆ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ದ.ಕ.ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು,ಉಪಾಧ್ಯಕ್ಷರಾದ ಮಹಮ್ಮದ್ ಹನೀಫ್ ಎಸ್.ಕೆ. ಸದಸ್ಯರಾದ ರಮೇಶ ಹುಲ್ಲುಬೆಂಕಿ,
ಸಂಪಾಜೆ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಯು.ಬಿ.ಚಕ್ರಪಾಣಿ, ಸಂಚಾಲಕರಾದ ಎಂ. ಶಂಕರನಾರಾಯಣ ಭಟ್,ಖಜಾಂಜಿ ಬಿ.ಆರ್. ಪದ್ಮಯ್ಯ ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಯೋಗೇಶ್ವರ್ ಎಸ್.
ಸಂಪಾಜೆ ಎಜ್ಯುಕೇಶನ್ ಸೊಸೈಟಿ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಕೆ.ಜಿ. ಮುರಳೀಧರ್,ಸುಬ್ರಹ್ಮಣ್ಯ ಉಪಾಧ್ಯಾಯ ಪಿ.,
ಜಯರಾಮ ಕೆ.ಎಸ್.,
ಡಾ। ಜಯರಾಮ ಯು.ಪಿ,
ನಾರಾಯಣ ಭಟ್ ಕೆ.ಎಸ್.,
ಗಣಪತಿ ಭಟ್ ಪಿ.ಎನ್. ,
ಎಂ. ಕೃಷ್ಣಪ್ಪ , ಕೆ. ರಾಮ ಪಾಟಾಳಿ ಸಂಪಾಜೆ,ಕೊರಗಪ್ಪ ಅರಮನೆತೋಟ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲರಾದ ಲೋಕ್ಯ ನಾಯ್ಕ್, ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕ ಐತ್ತಪ್ಪ ನಾಯ್ಕ್ ಉಪಸ್ಥಿತರಿದ್ದರು.
ಶಿಕ್ಷಕ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.