ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಕೆನರಾ ಬ್ಯಾಂಕ್ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಜ.7ರಂದು ಮಡಪ್ಪಾಡಿ ಯುವಕ ಮಂಡಲ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಹಾಡಿಕಲ್ಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಂ.ವಿ. ವಂದಿತ್ ಮಡಪ್ಪಾಡಿ, ಚರಿಶ್ಯ ಗಟ್ಟಿಗಾರು, ಪ್ರಮೀಳ ಬಳ್ಳಡ್ಕ ಇವರನ್ನು ಸನ್ಮಾನಿಸಲಾಯಿತು.
ವಿಕಸಿತ ಭಾರತ ಸಂಕಲ್ಪ ಕುರಿತು ತೆರೆದ ವಾಹನದಲ್ಲಿ ಪರದೆಯನ್ನು ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗುತ್ತಿಗಾರು ಕೆನರಾ ಬ್ಯಾಂಕ್ ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಯವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೆಲ್ವಿಚಾರಕರು, ಬಲ್ಕಜೆ ಉಪ ಆರೋಗ್ಯ ಕೆಂದ್ರದ ಸಮುದಾಯ ಆರೋಗ್ಯಧಿಕಾರಿಯವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಧರ್ಮಸ್ಥಳ ಒಕ್ಕೂಟದ ಪದಾಧಿಕಾರಿಗಳು , ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.