ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ : ಉತ್ಸವ ಬಲಿ

0

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಭಕ್ತಿ,ಸಂಭ್ರಮದಿಂದ ನಡೆಯುತ್ತಿದ್ದು ಜ.10 ರಂದು ಬೆಳಿಗ್ಗೆ ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಿತು.


ರಾತ್ರಿ ಮಿತ್ತೂರು ದೈವಗಳ ಭಂಡಾರ ಆಗಮನವಾಯಿತು.ಬಳಿಕ ಶ್ರೀ ದೇವರ ಉತ್ಸವ ಬಲಿ ನಡೆಯಿತು. ಕಾನತ್ತಿಲ ದೈವಗಳ ಭಂಡಾರ ಆಗಮನವಾಯಿತು.ನಂತರ ವಾಲಸಿರಿ ಉತ್ಸವ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ,ಸಮಿತಿ ಸದಸ್ಯರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ಬೆಳಿಗ್ಗೆ ಶ್ರೀ ದೇವರ ದೊಡ್ಡದರ್ಶನ ಬಲಿ,ಬಟ್ಟಲು ಕಾಣಿಕೆ ನಡೆಯುವುದು. ರಾತ್ರಿ ಕಲ್ಕುಡ ದೈವಗಳ ಭಂಡಾರ ಬರುವುದು ಬಳಿಕ ರಥೋತ್ಸವ ನಡೆಯಲಿದೆ.