ಸುಳ್ಯ ಚೆನ್ನಕೇಶವ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಮಕ್ಕಳ ಶ್ವೇತ ಪಡೆಯು ಸ್ವಚ್ಚತೆಯ ಜಾಗೃತಿ ಅಭಿಯಾನವನ್ನು ಕೈಗೊಂಡರು.
ಜಾತ್ರೆಗೆ ಆಗಮಿಸಿದ ಭಕ್ತರಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಕಸದ ತೊಟ್ಟಿಯಲ್ಲಿ ಹಾಕುವಂತೆ ಸೂಚಿಸುವ ಮೂಲಕ ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ , ಶಾಲೆಯ ಸಂಚಾಲಕ ಚಂದ್ರಶೇಖರ ದಾಮ್ಲೆ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ದಾಮ್ಲೆ ಹಾಗೂ ಶಿಕ್ಷಕ ದೇವಿ ಪ್ರಸಾದ್ ಕಾಯರ್ತೋಡಿ ಮತ್ತಿತರರು ಉಪಸ್ಥಿತರಿದ್ದರು.