ಮೂರು ದಿನಗಳ ಕಾಲ ನಡೆಯಲಿದೆ ಸಂಭ್ರಮದ ಮಹೋತ್ಸವ
ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವಕ್ಕೆ ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ರವರು ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರವೇಶ ಬಾಗಿಲಿನಲ್ಲಿ ವಿದ್ಯಾ ಮಹಾಗಣಪತಿ ಮೂರ್ತಿ ಸ್ಥಾಪಿಸಲಾಗಿದ್ದು ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ
ಎಸ್. ಅಂಗಾರ ರವರು ಪುಷ್ಪ ಮಾಲೆಯನ್ನು ಸಮರ್ಪಿಸಿ ಪ್ರಾರ್ಥನೆ ನೆರವೇರಿಸಿದರು.
ಇಂದಿನಿಂದ ಮೂರು ದಿನಗಳ ಕಾಲ ಸುವರ್ಣ ಮಹೋತ್ಸವ ಕಾರ್ಯಕ್ರಮ ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಈ ಸಂದರ್ಭದಲ್ಲಿ ಶಾಲೆಯ ಸಮಿತಿ ಸಂಚಾಲಕ ರಾಧಾಕೃಷ್ಣ ಬೊಳ್ಳೂರು,ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ವಿ ಕಡಪಳ, ಆಡಳಿತ ಮಂಡಳಿಯ ನಿರ್ದೇಶಕರು, ಸಮಿತಿಯ ಪದಾಧಿಕಾರಿಗಳು ,ಸದಸ್ಯರು ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ,ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ನಾಡಗೀತೆ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಕಾರ್ಯಕ್ರಮ ನಿರ್ವಹಿಸಿದರು.