ನಾಳೆ ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ- 2024

0

ಸಾಂಸ್ಕೃತಿಕ ವೈವಿಧ್ಯ- ಸನ್ಮಾನ- ಚಾ ಪರ್ಕ ಕಲಾವಿದರಿಂದ ‘ಪುದರ್ ದೀದಾಂಡ್’ ತುಳು ನಾಟಕ

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ – 2024 ದುಗ್ಗಲಡ್ಕದ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಇನ್ನರ್ ವ್ಹೀಲ್ ಕ್ಲಬ್ ಕಾರ್ಯದರ್ಶಿ ಶ್ರೀಮತಿ ಚಿಂತನ ಸುಬ್ರಹ್ಮಣ್ಯ ಮಾಣಿಬೆಟ್ಟು ನೆರವೇರಿಸಲಿದ್ದಾರೆ. ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆಯ ಸಭಾ ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಉದ್ಘಾಟಿಸಲಿದ್ದಾರೆ. ಸುಳ್ಯ ವೆಂಕಟರಮಣ ಸೊಸೈಟಿಯ ಅಧ್ಯಕ್ಷ ಪಿ.ಸಿ. ಜಯರಾಮ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೆ. ಟಿ. ವಿಶ್ವನಾಥ ರವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದುಗ್ಗಲಡ್ಕ ಮತ್ತು ನೀರಬಿದಿರೆ ಅಂಗನವಾಡಿ ಮಕ್ಕಳಿಂದ ನೃತ್ಯ, ಸರಕಾರಿ ಪ್ರೌಢಶಾಲೆ
ದುಗ್ಗಲಡ್ಕ ಮತ್ತು ಸ.ಹಿ.ಪ್ರಾ.ಶಾಲೆ ಕೊಯಿಕುಳಿ ಇಲ್ಲಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಸುಳ್ಯದ ರಂಗಮಯೂರಿ ಕಲಾ ಶಾಲೆ ಇವರಿಂದ ನೃತ್ಯ ವೈಭವ,ಖ್ಯಾತ ಗಾಯಕರಾದ ಶಶಿಧರ ಮಾವಿನಕಟ್ಟೆ, ಬಾಲಕೃಷ್ಣ ನೆಟ್ಟಾರು, ಕೃಷ್ಣರಾಜ್ ಕೇರ್ಪಳ, ಪೂರ್ಣಿಮಾ ಕೃಷ್ಣರಾಜ್ ಇವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. ಹಾಗೂ ಸಂಘದ ಸದಸ್ಯರಿಂದ ನೃತ್ಯ ಮತ್ತು ಗಾಯನ ನಡೆಯಲಿದೆ. ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ಚಾಪರ್ಕ ಕಲಾವಿದರಿಂದ ಕಾಪಿಕಾಡ್ , ವಾಮಂಜೂರ್, ಬೋಳಾರ್ ಅಭಿನಯದ ತುಳು ಹಾಸ್ಯಮಯ ನಾಟಕ ಪುದರ್ ದೀದಾಂಡ್ ನಡೆಯಲಿದೆ.ಎಂದು ಸಂಘಟಕರು ತಿಳಿಸಿದ್ದಾರೆ.