ವಿದ್ಯಾರ್ಥಿಗಳ ಆರೋಗ್ಯವನ್ನು ಹೆಚ್ಚಿಸುವ ಮೊಳಕೆ ಕಾಳುಗಳ ಸೇವನೆ ಕಾರ್ಯಕ್ರಮಕ್ಕೆ ಚಾಲನೆ
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ
ವಿವೇಕಾನಂದ ಜಯಂತಿ ಹಾಗೂ ಆರೋಗ್ಯದ ಕಡೆ ನಮ್ಮ ನಡೆ ಕಾರ್ಯಕ್ರಮವು ಬಹಳ ವಿಶಿಷ್ಟ ರೀತಿಯಲ್ಲಿ ಜ.12 ರಂದು ಆಚರಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಆರೋಗ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೊಳಕೆ ಕಾಳುಗಳ ಸೇವನೆಗೆ ಚಾಲನೆ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಂಡುಬರುವ ಪೌಷ್ಟಿಕಾಂಶದ ಕೊರತೆಯನ್ನು ಮನಗಂಡ ಸಂಸ್ಥೆಯ ಆಡಳಿತ ಮಂಡಳಿಯು ಒಂದು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮೊಳಕೆ ಕಾಳು ಹಾಗೂ ಬುತ್ತಿಯನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ ಸತ್ವಂ ಹೆಲ್ತ್ ಕ್ಲಿನಿಕ್ ಎಲಿಮಲೆಯ ಡಾ.ಮಹೇಶ್ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಅಕ್ಷರಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಅಧ್ಯಕ್ಷರಾದ ಗಣೇಶ್ ಪ್ರಸಾದ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು.