ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆಯುವ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಇಂದು ನಡೆಯಿತು.ಸುಳ್ಯ ಇನ್ಬರ್ ವೀಲ್ ಕ್ಲಬ್ ಕಾರ್ಯದರ್ಶಿ ಶ್ರೀಮತಿ ಚಿಂತನಾ ಸುಬ್ರಹ್ಮಣ್ಯ ಮಾಣಿಬೆಟ್ಟು ಡೋಲು ಬಾರಿಸಿ ಉದ್ಘಾಟಿಸಿದರು.ಅತಿಥಿಗಳಾಗಿ ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ದುಗ್ಗಲಡ್ಕ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ., ಮರ್ಕಂಜ ವಲಯ ಬೀಟ್ ಫಾರೆಸ್ಟ್ ನ ಜಯಪ್ರಕಾಶ್ ಜೆ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಕುರಲ್ ತುಳುಕೂಟ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ ವಹಿಸಿದ್ದರು. ವೇದಿಕೆಯಲ್ಲಿ ಕುರಲ್ ತುಳುಕೂಟ ಸಂಚಾಲಕ ಕೆ.ಟಿ.ವಿಶ್ವನಾಥ, ಗೌರವಾಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ, ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ, ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ ಉಪಸ್ಥಿತರಿದ್ದರು.
ಕುರಲ್ ತುಳುಕೂಟ ಸಾಂಸ್ಕೃತಿಕ ಕಾರ್ಯದರ್ಶಿ ಪ್ರಿಯಾ ಸದಾನಂದ ಸ್ವಾಗತಿಸಿ, ಕಾರ್ಯದರ್ಶಿ ಮನೋಜ್ ಪಾನತ್ತಿಲ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಸ್ಥಳೀಯ ಅಂಗನವಾಡಿ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯುತ್ತಿದೆ. ಸಂಜೆ ಮಂಗಳೂರಿನ ಚಾ ಪರ್ಕ ಕಲಾವಿದರಿಂದ ಪುದರ್ ದೀದಾಂಡ್ ನಡೆಯಲಿದೆ.