ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಧಾರ್ಮಿಕ ಸಭಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ಳಾರೆ ವಲಯ,ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು,ಪ್ರಗತಿ ಬಂಧು – ಸ್ವಸಹಾಯ ಸಂಘಗಳ ಒಕ್ಕೂಟ, ಐವರ್ನಾಡು, ಪಾಲೆಪ್ಪಾಡಿ,ದೇವರಕಾನ ಊರವರ ಸಹಕಾರದೊಂದಿಗೆ ಡಾ.ವೀರೇಂದ್ರ ಹೆಗ್ಗಡೆಯವರ ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 16 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜ.14 ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥ ಅಧ್ಯಕ್ಷತೆ ವಹಿಸಿದ್ದರು.


ಸುಳ್ಯ ವ್ಯಕ್ತಿತ್ವ ವಿಕಸನ ತರಬೇತುದಾರ ಚಂದ್ರಶೇಖರ ಬಿಳಿನೆಲೆ ಧಾರ್ಮಿಕ ಉಪನ್ಯಾಸ ನೀಡಿದರು.


ಶ್ರೀ.ಕ್ಷೇತ್ರ.ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸುಳ್ಯ ಯೋಜನಾಧಿಕಾರಿ ನಾಗೇಶ್ ಪಿ.ಪ್ರಾಸ್ತಾವಿಕವಾಗಿ ಮಾತನಾಡಿದರು.


ವೇದಿಕೆಯಲ್ಲಿ ದೇವಸ್ಥಾನದ ವ್ಯ.ಸ.ಮಾಜಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಬೆಳ್ಳಾರೆ ವಲಯದ ವಲಯಾಧ್ಯಕ್ಷೆ ಶ್ರೀಮತಿ ವೇದಾ ಎಚ್.ಶೆಟ್ಟಿ, ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಪಿ.ಡಿ.ಒ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.


ಗ್ರಾಮಾಭಿವೃದ್ದಿ ಯೋಜನೆಯಿಂದ ಕೊಡಿಯಾಲ ಗ್ರಾಮದ ಜಲಜಾಕ್ಷಿ ಎಂಬವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಚೆಕ್ ನೀಡಲಾಯಿತು.ಐವರ್ನಾಡಿನ ಲಲಿತ ಎಂಬವರಿಗೆ ಮಾಸಾಸನ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.

ಮುಪ್ಪೇರ್ಯ ಗ್ರಾಮದ ಚಿನ್ನಮ್ಮ ಎಂಬವರಿಗೆ ವಾಕರನ್ನು ನೀಡಲಾಯಿತು. ನಳಿನಿ ಪ್ರಾರ್ಥಿಸಿ,ಯಶೋಧರವರು ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ ಕಾರ್ಯಕ್ರಮ ನಿರೂಪಿಸಿ, ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ವಂದಿಸಿದರು. ನೂರಾರು ಜನರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.