ಪೆರುವಾಜೆ ದೇವಸ್ಥಾನದಲ್ಲಿ ಜಾತ್ರೋತ್ಸವ : ಧ್ವಜಾರೋಹಣ

0

ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಮಹಾಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಂದು ಜಾತ್ರೋತ್ಸವ ಪ್ರಾರಂಭಗೊಂಡಿತು. ಇಂದು ರಾತ್ರಿ ಧ್ವಜಾರೋಹಣ ನಡೆಯಿತು.
ದೇವಸ್ಥಾನದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳು ಧಾರ್ಮಿಕ ಪೂಜಾ ವಿಧಿ ವಿಧಾನ ನೆರವೇರಿಸಿದರು.


ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆಯಿತು.
ರಾತ್ರಿ ಧ್ವಜಾರೋಹಣದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಮಹಾಪೂಜೆ,ಶ್ರೀ ಭೂತಬಲಿ ನಡೆಯಿತು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು,ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್. , ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಚ ಉಮೇಶ್ ಕೆ.ಎಂ.ಬಿ, ಶ್ರೀಮತಿ ರಾಜೀವಿ ಆರ್.ರೈ, ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮಂಜಪ್ಪ ರೈ,ಅಮರನಾಥ ಶೆಟ್ಟಿ, ದಯಾಕರ ಆಳ್ವ, ಕರುಣಾಕರ ಆಳ್ವ, ಸುಧಾನಂದ ಪೆರುವಾಜೆ,ಕುಶಾಲಪ್ಪ ಪೆರುವಾಜೆ,ದೇವದಾಸ ಶೆಟ್ಟಿ,ಸುನಿಲ್ ರೈ ಪೆರುವಾಜೆ,ವಿಠಲ ಶೆಟ್ಟಿ , ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.