ಪೆರುವಾಜೆ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

0

ಶ್ರೀ ದೇವರ ವಸಂತ ಕಟ್ಟೆಪೂಜೆ, ವೈಭವದ ಪೇಟೆ ಸವಾರಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು ಜ.17 ರಂದು ಬೆಳಿಗ್ಗೆ
ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.
ಮದ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಪೇಟೆ ಸವಾರಿ, ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತು.


ದೇವಸ್ಥಾನದ ತಂತ್ರಿಗಳು, ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್.ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.