ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

0

ಯುವತ್ವದ ಸಮಯವನ್ನು ಸರಿಯಾದ ಮಾರ್ಗದಲ್ಲಿ ರೂಪಿಸಿಕೊಂಡಲ್ಲಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯ : ನ್ಯಾಯಾಧೀಶೆ ಕು. ಅರ್ಪಿತಾ

ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ, ಸ್ನೇಹ ಶಿಕ್ಷಣ ಸಂಸ್ಥೆ ಇದರ ಸಹಭಾಗಿತ್ವದಲ್ಲಿ ಜ. ೧೮ ರಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಚಂದ್ರಶೇಖರ ದಾಮ್ಲೆ ವಹಿಸಿದ್ದರು.

ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಸುಳ್ಯ ನ್ಯಾಯಾಲಯದ ಸಿವಿಲ್ ನ್ಯಾಯಧೀಶೆ ಕು.ಅರ್ಪಿತಾ ‘ವಿದ್ಯಾರ್ಥಿಗಳು ತಮ್ಮ ಬಾಲ್ಯ ಜೀವನವನ್ನು ಉತ್ತಮ ಶೈಕ್ಷಣಿಕದೊಂದಿಗೆ ತೊಡಗಿಸಿಕೊಂಡು ತಮ್ಮ ಯುವತ್ವವನ್ನು ಉತ್ತಮ ಜೀವನ ರೂಪಿಸುವ ಮಾರ್ಗದಲ್ಲಿ ತೊಡಗಿಸಿಕೊಂಡರೆ ಸಮೃದ್ಧಿಮಯ ಬದುಕನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಬಳಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲ ಚಂದ್ರಶೇಖರ ಉದ್ದಂತಡ್ಕ ಮಾತನಾಡಿ ವಿದ್ಯಾರ್ಥಿಗಳಿಗೆ ರಾಷ್ಟೀಯ ಯುವ ದಿನಾಚರಣೆಯ ಮಹತ್ವ ಮತ್ತು ಅನುಸರಿಸಬೇಕಾದ ಉತ್ತಮ ಗುಣಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ. ಸಹಾಯಕ ಸರ್ಕಾರಿ ಅಭಿಯೋಜಕ ಆರೋನ್ ಡಿ’ಸೋಜ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದರು.

ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಸ್ವಾಗತಿಸಿ ವಕೀಲರಾದ ಪ್ರದೀಪ್ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.