ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ಬಿ.ಇ. ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ 2023-24ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜ. 19ರಂದು ಅಮರಶ್ರೀಭಾಗ್ ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.


ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಸಮಿತಿ ಸದಸ್ಯ ಸಂತೋಷ್ ಜಾಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿ.ಟಿ.ಯು. ಇ.ಸಿ. ಮೆಂಬರ್ ಡಾ‌. ಉಜ್ವಲ್ ಯು.ಜೆ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ. ಶ್ರೀಧರ್ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕೆಮಿಸ್ಟ್ರಿ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಎಂ. ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.


ವಿದ್ಯಾರ್ಥಿಗಳಾದ ಸಪ್ತಮಿ, ಶೃತಿ, ಮೊಹಮ್ಮದ್ ಅಜ್ಮಲ್ ಮತ್ತು ಕಿರಣ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್ ಮತ್ತು ಪ್ರೊ. ಲೋಕೇಶ್ ಪಿ.ಸಿ ಸಹಕಾರ ನೀಡಿದರು. ವಿದ್ಯಾರ್ಥಿ ನಾಯಕರಾದ ಪ್ರಜ್ಞಾ ಜೆ.ಯು, ಯಶವಂತ ಬಿ.ಪಿ, ಆದಿತ್ಯ ಕೆ, ಪ್ರಸಾದ್ ಎಂ, ಅಭಿಷೇಕ್ ಆರ್.ಆರ್ ಮತ್ತು ಶಾಶ್ವತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಕಾಲೇಜಾಗಿ ಗುರುತಿಸಿಕೊಂಡಿದೆ‌. ಡಾ. ರೇಣುಕಾಪ್ರಸಾದ್ ರವರ ಮಾರ್ಗದರ್ಶನದಂತೆ ಸುಮಾರು 22 ವರ್ಷಗಳಿಂದ ಸಂಸ್ಥೆಯಲ್ಲಿ ದುಡಿಯುತ್ತಿರುವ ಡಾ‌. ಉಜ್ವಲ್ ಯು.ಜೆ.ಯವರು ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ. ದೂರದಿಂದ ಬಂದ ವಿದ್ಯಾರ್ಥಿಗಳಿಗೆ ಹೊಸ ಸ್ಥಳ ಎಂಬ ಅಂಜಿಕೆ ಬೇಡ. ನಿಮ್ಮ ಹೆತ್ತವರ ಆಶಯವನ್ನು ಈಡೇರಿಸುವಲ್ಲಿ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿ. ಯಶಸ್ಸನ್ನು ಪಡೆಯಿರಿ – ಸಂತೋಷ್ ಜಾಕೆ

ಸಂಸ್ಥೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ವೈಯಕ್ತಿಕ ಬೆಳವಣಿಗೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿರುತ್ತದೆ. ವಿದ್ಯಾರ್ಥಿ ಜೀವನವು ಗೋಲ್ಡನ್ ಡೇಸ್. ಹೊಸತನ್ನು ಕಲಿಯಲು, ಪರ್ಸನಲ್ ಡೆವಲಪ್ಮೆಂಟ್ ಗೆ ಇದೊಂದು ಸುವರ್ಣಾವಕಾಶ. ಆಟೋಟ, ಸಾಂಸ್ಕೃತಿಕ, ಸ್ಕಿಲ್ ಡೆವಲಪ್ಮೆಂಟ್, ಪರ್ಸನಲ್ ಡೆವಲಪ್ಮೆಂಟ್ ಸೇರಿದಂತೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂಸ್ಥೆ ವೇದಿಕೆಯನ್ನು ಒದಗಿಸಿದೆ‌. ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರಬನ್ನಿ – ಡಾ. ಉಜ್ವಲ್ ಯು.ಜೆ.