ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು, ನಿಮ್ಮ ಬೇಡಿಕೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ಸೆಳೆಯುತ್ತೇನೆ. ನೌಕರರ ಪರವಾಗಿ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದರು.
ಬೇಡಿಕೆಯನ್ನು ಸಭೆಯ ಮುಂದಿರಿಸಿದ ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆಯವರು, ‘` ಏಳನೇ ವೇತನ ಆಯೋಗದಿಂದ ವರದಿ ಪಡೆದು ಪರಿಷ್ಕೃತ ವೇತನ ಭತ್ಯಗಳನ್ನು ಜಾರಿಗೊಳಿಸುವುದು. ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಮಾಡಬೇಕೆನ್ನುವುದು ನಮ್ಮ ಬೇಡಿಕೆ ಎಂದು ಅವರು ವಿವರ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ., ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ವ್ಯವಸ್ಥಾಪಕ ಕಿಶೋರ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆ, ಕೋಶಾಧಿಕಾರಿ ಶ್ರೀಮತಿ ಶೀಲಾವತಿ, ಶ್ರೀಮತಿ ಸರೋಜಿನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಪದವಿಧರೇತರ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜ್ ಕೆ.ಎಸ್ ವೇದಿಕೆಯಲ್ಲಿ ಇದ್ದರು.
ಸಮೂಲ ಸಂಪನ್ಮೂಲ ವ್ಯಕ್ತಿ ಮಮತಾ ರವೀಶ್ ಪ್ರಾರ್ಥಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕುಶಾಲಪ್ಪ ಪಾರೆಪ್ಪಾಡಿ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ಪಿ ಕಾರ್ಯಕ್ರಮ ನಿರೂಪಿಸಿದರು.