ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ 2023 24 ನೇ ಸಾಲಿನ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯಿತಿಯ ಅಮೃತ ಸಭಾಂಗಣದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿಯ ವಿದ್ಯಾರ್ಥಿ ನಾಯಕ ಲಿಖಿತ್ ಅಡ್ಕಬಳೆ ಅವರ ಅಧ್ಯಕ್ಷತೆಯಲ್ಲಿ ಜ. 20ರಂದು ನಡೆಯಿತು.
ಸಭೆಯಲ್ಲಿ ವಿದ್ಯಾರ್ಥಿಗಳು ಶಾಲಾ ಮೂಲಭೂತ ಸೌಕರ್ಯ, ಶಾಲೆಯಿಂದ ಮನೆಗಳಿಗೆ ಸಂಪರ್ಕಿಸುವ ರಸ್ತೆಗಳ ಬಗ್ಗೆ, ಸಾರ್ವಜನಿಕ ಅಂಗಡಿಗಳಲ್ಲಿ ಅನಧಿಕೃತವಾಗಿ ಸಾರಾಯಿ ಮಾರಾಟದ ಬಗ್ಗೆ ಗಮನ ಸೆಳೆಯುವ, ಪ್ರಶ್ನೆಗಳನ್ನು ಕೇಳಿದರು.
ಈ ಸಂದರ್ಭದಲ್ಲಿ ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಆಡ್ತಲೆ, ಉಪಾಧ್ಯಕ್ಷೆ ಶ್ರೀಮತಿ ಭವಾನಿ. ಸಿ. ಎ. ಸದಸ್ಯರುಗಳಾದ ವೆಂಕಟ್ರಮಣ ಪೆತ್ತಾಜೆ, ಶ್ರೀಮತಿ ಹರಿಣಿ ದೇರಾಜೆ, ಕುಮಾರಿ ಶ್ವೇತಾ ಅರಮನೆಗಯ, ಶ್ರೀಮತಿ ಮಾಲಿನಿ ವಿನೋದ್ ಉಳುವಾರು, ಶ್ರೀಮತಿ ಸರಸ್ವತಿ ಬಿಳಿ ಯಾರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಗ್ರಾಮ ಪಂಚಾಯಿತಿ ಗ್ರಂಥಾಲಯದ ಸಂಯೋಜನೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಮಕ್ಕಳ ಗ್ರಾಮ ಸಭೆಯಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭವಾನಿ ಚಿಟ್ಟನೂರು ವಂದಿಸಿದರು.