ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ
ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಆದೇಶದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರಾಸ್ತ್ರ ಒಯ್ಯುವುದು. ಪಟಾಕಿಗಳನ್ನು ಸಿಡಿಸುವುದು ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
ಯಾವುದೇ ರೀತಿಯ ಪ್ರತಿಭಟನೆ. ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಜಾಥಾ ಮುಷ್ಕರ. ರಸ್ತೆ ತಡೆ ಸಾರ್ವಜನಿಕ, ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು, ವಾದ್ಯ ಬಾರಿಸುವುದು ನಿಷೇಧಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.