ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದಲ್ಲಿ ವಿಶೇಷ ಭಜನೆ ನಡೆಯುತ್ತಿದೆ.ಅಯ್ಯಪ್ಪ ಭಜನಾ ಮಂದಿರದ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಭಜನಾ ಮಂದಿರದ ಅಧ್ಯಕ್ಷರಾದ ದಯಾನಂದ ಸಾಲಿಯಾನ್, ಪ್ರಮುಖರಾದ ಸುಂದರ ರಾವ್, ಯತೀಶ್ ರೈ, ಬಾಲಕೃಷ್ಣ ರೈ ದುಗ್ಗಲಡ್ಕ, ಶ್ರೀಮತಿ ಪ್ರಭಾವತಿ ರೈ, ನಾರಾಯಣ ನಾಯ್ಕ ಮೊದಲಾದವರು ಉಪಸ್ಥಿತರಿದ್ದಾರೆ.