ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಭಜನೆ ಸಂಕೀರ್ತನೆ ಪ್ರಾರಂಭಗೊಂಡಿತು.
ಶ್ರೀ ರಾಮ ದೇವರ ಭಾವಚಿತ್ರ ಇರಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವು ಆರಂಭವಾಯಿತು.
ದೇವಳದ ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಹಾಗೂ ಸಮಿತಿ ಸದಸ್ಯರಾದ ಹರಿಪ್ರಸಾದ್ ಗಬ್ಬಲ್ಕಜೆ, ಅಚ್ಚುತ ಮಣಿಯಾಣಿ ಆಲೆಟ್ಟಿ, ಸತೀಶ್ ಕುಂಭಕೋಡು, ಮಮತಾ ನಾರ್ಕೋಡು, ಅರ್ಚಕ ಹರ್ಷಿತ್ ಬನ್ನಿಂತಾಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹರಿಪ್ರಸಾದ್ ಕಾಪುಮಲೆ ಶ್ರೀ ರಾಮನ ಇತಿಹಾಸದ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಅಯೋಧ್ಯೆಯ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗಿತ್ತು.
ಮಧ್ಯಾಹ್ನ ಮಹಾಪೂಜೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.
ವಿಶ್ವ ಹಿಂದೂ ಪರಿಷತ್ ಬಜರಂಗದಳದ ಜಿಲ್ಲಾ ಸಂಚಾಲಕ ಲತೀಶ್ ಗುಂಡ್ಯ, ನಾರಾಯಣ ರೈ ಆಲೆಟ್ಟಿ ಹಾಗೂ ಕಾರ್ಯಕರ್ತರು,
ಭಜನಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮದ ಭಕ್ತಾದಿಗಳು ಭಾಗವಹಿಸಿದರು.
ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.