ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಪೆರಾಜೆಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮುಂಭಾಗದಲ್ಲಿ ಇಂದು ನಡೆಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ಚಂದ್ರಕಲಾ ಬಾಲಚಂದ್ರ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಕೆನರಾ ಬ್ಯಾಂಕ್ ಮ್ಯಾನೇಜರ್ ಅರ್ಜುನ್, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮ್ಯಾನೇಜರ್ ನಿತಿನ್ ಕುಮಾರ್, ಗ್ರಾಮ ಪಂಚಾಯತ್ ಪಿಡಿಒ ಕುಮಾರ್ ಇದ್ದರು.
ಗ್ರಾಮ ಪಂಚಾಯತಿ ಪಿಡಿಒ ಕುಮಾರ್ ಸ್ವಾಗತಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿ ಶ್ರೀನಿವಾಸ್ ಸಂಕಲ್ಪ ಯಾತ್ರೆಯ ಪ್ರತಿಜ್ಞಾವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ ಜ್ಯೋತಿ ಭೀಮಾ ಯೋಜನೆ, ಉಜ್ವಲ ಗ್ಯಾಸ್ ಯೋಜನೆ, ವಿಶ್ವಕರ್ಮ ಯೋಜನೆ ಹಾಗೂ ಇನ್ನಿತರ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಮತ್ತು ನೋಂದಣಿ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಯೋಜನೆಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಮೋದಿ ಸರಕಾರದ ಗ್ಯಾರಂಟಿ ಬಗ್ಗೆ ತಿಳಿಸಲಾಯಿತು.