ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಸಭಾಧ್ಯಕ್ಷತೆ ವಹಿಸಿದ್ದರು.
ಮಕ್ಕಳ ಹಕ್ಕುಗಳ ಗ್ರಾಮ ಸಭೆಯ ನೋಡೆಲ್ ಅಧಿಕಾರಿಯಾಗಿ ಅಂಗನವಾಡಿ ಮೇಲ್ವಿಚಾರಕಿ
ಶ್ರೀಮತಿ ರವಿಶ್ರೀ,ಚೈಲ್ಡ್ ರೈಟ್ಸ್ ಟ್ರಸ್ಟ್ ತಾಲೂಕು ಸಂಯೋಜಕಿ ಶ್ರೀಮತಿ ಅಮೃತ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳಾ ಅರೋಗ್ಯ ಮತ್ತು ಸ್ವಚ್ಚತೆ ಬಗ್ಗೆ ಮಾಹಿತಿಯನ್ನು ನೀಡಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಹಾಜಿರ, ಎಸ್ ಡಿ ಎಂ ಸಿ ಅಧ್ಯಕ್ಷ ದಾವೂದ್ , ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ,ಪಂಜ ಮತ್ತು ಎಣ್ಮೂರು ಕ್ಲಸ್ಟರ್ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್,
ಆರಕ್ಷಕ ಠಾಣಾ ಸಿಬ್ಬಂದಿ ಹರೀಶ್,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿ ಪ್ರಸಾದ್ ,
ಕಲ್ಮಡ್ಕ ಪಂಬೆತ್ತಾಡಿ,ಕೋಟೆ ಗುಡ್ಡೆ,ಪಡ್ಮಿನಂಗಡಿ ಶಾಲೆಯ ವಿದ್ಯಾರ್ಥಿ ನಾಯಕರು
ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳ ಮೂಲಭೂತ ಸಮಸ್ಯೆ ಯ ಬಗ್ಗೆ ಚರ್ಚಿಸಲಾಯಿತು.
ಅಂಗನವಡಿ ಕಾರ್ಯಕರ್ತೆ,ಆಶಾ ಕಾರ್ಯಕರ್ತೆಯರು, ಎಸ್ ಡಿ ಎಂ ಸಿ ಸದಸ್ಯರು,,ಶಾಲಾ ಶಿಕ್ಷಕರು,ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸರೋಜಿನಿ ಕೆ ನಿರೂಪಿಸಿದರು.
ಶಿಕ್ಷಕಿ ಶ್ರೀಮತಿ ಸುಗಂಧಿ ವಂದಿಸಿದರು.