ಕಂದ್ರಪ್ಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ

0

ಶತಮಾನೋತ್ಸವ ಸಂಭ್ರಮದಲ್ಲಿರುವ ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಶಾಲೆಯ ವಿದ್ಯಾರ್ಥಿಗಳಿಗೆ ಕಡೋಡಿ ಕೊರಗಪ್ಪ ಗೌಡ ಮತ್ತು ಮನೆಯವರು, ವಿನ್ಯಾಸ್ ಕೊಚ್ಚಿ ಮತ್ತು ಮನೆಯವರು ಸಮವಸ್ತ್ರ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಚಂದ್ರಶೇಖರ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ ಹಾಗೂ ಅಧ್ಯಾಪಕ ವೃಂದ, ಹಿರಿಯ ವಿದ್ಯಾರ್ಥಿಗಳು, ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.