ಸುಳ್ಯದ ನಗರ ಪಂಚಾಯತ್ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಯುದ್ಧ ಸ್ಮಾರಕ’ ಲೋಕಾರ್ಪಣಾ ಕಾರ್ಯಕ್ರಮ ಜ.25ರಂದು ಸಂಜೆ ನಡೆಯಿತು.
ಮಾಜಿ ಸಚಿವ ಎಸ್.ಅಂಗಾರರು ಯುದ್ಧ ಸ್ಮಾರಕವನ್ನು ಲೋಕಾರ್ಪಣೆ ಗೈದರು.
ಮಂಗಳೂರು ಯುನಿವರ್ಸಿಟಿ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ನಿವೃತ್ತ ಕರ್ನಲ್ ಎನ್.ಎಸ್.ಭಂಡಾರಿ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಸಲ್ಲಿಸಿದರು.
ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಮಾಜಿ ಸೈನಿಕ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಪುತ್ತೂರು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ.ನಾರಾಯಣ ಭಟ್, ಸುಳ್ಯ ಮಾಜಿ ಸೈನಿಕರ ಸಂಘದ ಗೌರವ ಅಧ್ಯಕ್ಷ ಅಡ್ಡಂತಡ್ಕ, ನಗರ ಪಂಚಾಯತ್ ಮಾಜಿ ಅಧ್ಯಕ್ಷರು ಗಳಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಸುಳ್ಯ ತಾಲೂಕು ಸೈನಿಕರ ಸಂಘದ ಅಧ್ಯಕ್ಷ ಕೆ.ಪಿ.ಜಗದೀಶ್ ರವರು ಗೌರವಾರ್ಪಣೆ ಸಲ್ಲಿಸಿದರು.
ನಗರ ಪಂಚಾಯತ್ ಸದಸ್ಯರುಗಳಾದ ಸುಧಾಕರ ಕುರುಂಜಿಭಾಗ್, ಬುದ್ದ ನಾಯ್ಕ, ಬಾಲಕೃಷ್ಣ ಭಟ್ ಕೊಡೆಂಕಿರಿ, ನಾರಾಯಣ ಶಾಂತಿನಗರ, ಶರೀಫ್ ಕಂಠಿ, ಶಶಿಕಲಾ ನೀರಬಿದಿರೆ, ಪೂಜಿತಾ ಕೆ.ಯು., ಸುಶೀಲಾ ಕಲ್ಲುಮುಟ್ಲು, ಶಿಲ್ಪಾ ಸುದೇವ್, ಕಿಶೋರಿ ಶೇಟ್, ಶೀಲಾ ಕುರುಂಜಿ, ಪ್ರವಿತಾ ಪ್ರಶಾಂತ್, ಸರೋಜಿನಿ ಪೆಲತಡ್ಕ, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ , ಸೈನಿಕರ ಸಂಘದ ಕಾರ್ಯದರ್ಶಿ ಮೋನಪ್ಪ ಗೌಡ ಅಡ್ಕಬಳೆ, ಸೈನಿಕರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಅವರ ಮನೆಯವರು ಕಾರ್ಯಕ್ರಮದಲ್ಲಿ ಇದ್ದರು.
ಸುಳ್ಯ ಎನ್ನೆಂಸಿ ಎನ್.ಸಿ.ಸಿ. ವಿದ್ಯಾರ್ಥಿಗಳು ಬ್ಯಾಂಡ್ – ವಾದ್ಯದಲ್ಲಿ ಸಹಕರಿಸಿದರು.
ಶ್ರೀದೇವಿ ನಾಗರಾಜ್ ಭಟ್ ಕಾರ್ಯಕ್ರಮ ನಿರೂಪಿಸಿದರು.