ಸುಬ್ರಹ್ಮಣ್ಯದಲ್ಲಿ ಪ್ರಧಾನ ಕಚೇರಿ ಹೊಂದಿ, ಬೆಳ್ಳಾರೆ, ಸುಳ್ಯ ಮತ್ತು ಜಾಲ್ಸೂರಿನಲ್ಲಿ ಶಾಖೆಗಳನ್ನು ಹೊಂದಿರುವ ಸುಳ್ಯ ತಾಲೂಕು ಮಹಿಳೆಯರ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಅವಿರೋಧವಾಗಿ ನಡೆದಿತ್ತು. ಜ. 25ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು. ಸಂಘದ ಹಾಲಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ ರೈ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ಉಪ್ಪಳಿಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.