ಮಾನವೀಯತೆ, ಶಿಸ್ತು ಮತ್ತು ಸಮರ್ಪಣಾ ಮನೋಭಾವದಿಂದ ಉತ್ತಮ ನ್ಯಾಯಾವಾದಿಗಳಾಗಲು ಸಾಧ್ಯ ಎಂದು ಜಾರ್ಖಂಡ್‌ನ ನಿವೃತ ಮುಖ್ಯನ್ಯಾಯಾದೀಶರಾದ ಎಂ. ಕರ್ಪಗ ವಿನಯಗಂ ಹೇಳಿದರು. ಅವರು ಜ. ೨೫ ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಉತ್ತಮ ವಕೀಲನಾಗುವುದು ಹೇಗೆ ? ಎಂಬ ವಿಷಯದ ಬಗ್ಗೆ ಕಾನೂನು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಇವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ.ಬಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ. ಹೆಚ್.ಎಸ್, ಕಾನೂನು ನೆರವು ಸಮಿತಿಯ ಸಂಯೋಜಕಿ ನಯನಾ. ಪಿ.ಯು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರಮ್ಯ ಕೆ.ಎಮ್ ಮತ್ತು ಚಂದನ ಪಿ.ಎಸ್ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಉದಯಕೃಷ್ಣ. ಬಿ ಸ್ವಾಗತಿಸಿ, ಉಪನ್ಯಾಸಕಿ ಕಲಾವತಿ. ಎಂ ನಿರೂಪಿಸಿ, ಉಪನ್ಯಾಸಕಿ ಟೀನಾ ಹೆಚ್.ಎಸ್ ವಂದಿಸಿದರು. ಕಾರ್‍ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪೂರ್ವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.