ಜ.30 : ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

0

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವವು ಜ.30 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 8.00 ಕ್ಕೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ,ಶುದ್ಧಿ ಕಲಶ ನಡೆಯಲಿದೆ.
ಗಂಟೆ 10.00ರಿಂದ ಬೆಳಂದೂರು ವಲಯದ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಸಾಯಂಕಾಲ 6.30 ಕ್ಕೆ ರಂಗಪೂಜೆ,ಮಹೋತ್ಸವ,ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ,ಗುಳಿಗ,ಪಂಜುರ್ಲಿ,ಶಿರಾಡಿ ದೈವಗಳ ನೇಮ ನಡೆಯಲಿದೆ.