೭೪ನೆ ಭಾರತೀಯ ಗಣರಾಜ್ಯೋತ್ಸವವನ್ನು ಸವಣೂರಿನ ವಿದ್ಯಾರಶ್ಮಿಯಲ್ಲಿ ಆಚರಿಸಲಾಯಿತು. ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈಯವರು ಧ್ವಜಾರೋಹಣಗೈದು ಮಾತನಾಡಿ ಗಣರಾಜ್ಯೋತ್ಸವ ಆಚರಣೆಯ ಮಹತ್ವವನ್ನು ವಿವರಿಸಿದರು. ರಾಷ್ಟ್ರದ ಏಳಿಗೆಗಾಗಿ ನಾವೆಲ್ಲರೂ ಕಟಿಬದ್ಧರಾಗಬೇಕು ಮತ್ತು ವಿಶೇಷವಾಗಿ ವಿದ್ಯಾರ್ಥಿಗಳು ರಾಷ್ಟ್ರೀಯ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆನೀಡಿದರು.
ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ಸಮೂಹದ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕ ದೀಪಕ್ ಬಿ.ಎಂ. ನಿರೂಪಣೆ, ರಾಜ್ಯಶಾಸ್ತ್ರ ಉಪನ್ಯಾಸಕ ಕಿರಣ್‌ಚಂದ್ರ ಸ್ವಾಗತ, ತೃತೀಯ ಬಿ.ಎ. ವಿದ್ಯಾರ್ಥಿ ಅಬ್ದುಲ್ ಸಮೀರ್ ವಂದನಾರ್ಪಣೆ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಮತ್ತು ಧ್ವಜಗೀತೆ ಗಾಯನಗಳಲ್ಲಿ ಸಹಕರಿಸಿದರು.