ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ- ಪ್ರತಿಭಾ ಪುರಸ್ಕಾರ ಸಮಾರಂಭ

0

“ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದೊಂದಿಗೆ ಆತ್ಮ ಸ್ಥೈರ್ಯ ತುಂಬುವ ಬೋಧನೆಯಾಗಬೇಕು: ಪ್ರಕಾಶ ಮೂಡಿತ್ತಾಯ

ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತ್ತು ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ 75 ನೇವರ್ಷದಗಣರಾಜ್ಯೋತ್ಸವ ಆಚರಣೆಯು ಬೆಳಗ್ಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಚೇತನ್ ನಾಯಕ್ ರವರು ಧ್ವಜಾರೋಹಣಗೈದು ನೆರವೇರಿಸಿದರು.

ಸಂಜೆ ನಡೆದ ಪ್ರತಿಭಾ ಪುರಸ್ಕಾರಸಮಾರಂಭದಅಧ್ಯಕ್ಷತೆಯನ್ನು ವಿದ್ಯಾ ಸಂಘದ ಅಧ್ಯಕ್ಷೆ ಡಾ.ಸಾಯಿಗೀತಾ ಜ್ಞಾನೇಶ್ ವಹಿಸಿದ್ದರು.
ಗೌರವಾಧ್ಯಕ್ಷೆ ಹಿರಿಯರಾದ ಶ್ರೀಮತಿ ವೇದಾವತಿ ಅನಂತ ರವರು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಸುಳ್ಯಸ.ಪ.ಪೂ.ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ರವರು ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕರಾದ ರಾಮಕೃಷ್ಣ ಕಡಂಬಳಿತ್ತಾಯ, ಪಂಚಾಯತ್ ಸದಸ್ಯರಾದ ಸತ್ಯಕುಮಾರ್ ಆಡಿಂಜ, ಕೃಷ್ಣ ಕ್ಲಿನಿಕ್ ನ ಡಾ.ಕೇಶವ ಪಿ.ಕೆ.ಪೆರುಮುಂಡ,
ಶಾಲಾ ಸಂಚಾಲಕ ಡಾ.ಎನ್.ಎ.ಜ್ಞಾನೇಶ್, ಎಸ್.ಡಿ.ಎಂ.ಸಿ.
ಅಧ್ಯಕ್ಷ ಚೇತನ್ ಕೆ .ನಾಯಕ್,ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ, ವಿದ್ಯಾರ್ಥಿ ನಾಯಕಿ ಕು.ತೇಕ್ಷಾ ಪಿ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ವಿದ್ಯಾರ್ಥಿ ರಕ್ಷಿತಾ, ಆತ್ಮಿಕಾ ಪ್ರಾರ್ಥಿಸಿದರು.
ಪ್ರಾಸ್ತಾವಿಕ ಮಾತಿನೊಂದಿಗೆ ಶಾಲಾ ಸಂಚಾಲಕ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ ವಾರ್ಷಿಕ ವರದಿ ವಾಚಿಸಿ, ವಂದಿಸಿದರು. ಪಂಚಾಯತ್ ಪಿ.ಡಿ.ಒ ದಯಾನಂದ ಪತ್ತುಕುಂಜ ಮತ್ತು ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರತಿಭಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಕ್ರೀಡೋತ್ಸವದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹಶಿಕ್ಷಕಿಯರು ಬಹುಮಾನ ಪಟ್ಟಿ ವಾಚಿಸಿದರು.


ಸಾಂಸ್ಕೃತಿಕ ಕಾರ್ಯಕ್ರಮ:


ಸ್ಥಳೀಯ ಅಂಗನವಾಡಿ ಮಕ್ಕಳಿಂದ ಮತ್ತು ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಗಾನನೃತ್ಯ ಅಕಾಡೆಮಿ ಮಂಗಳೂರಿನ ಸುಳ್ಯ ಶಾಖೆಯ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಪ್ರದರ್ಶನವಾಯಿತು.
ರಾತ್ರಿ ಆಗಮಿಸಿದ ಎಲ್ಲಾ ವಿದ್ಯಾಭಿಮಾನಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.


ಶಾಲಾ ಸಹ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಹಕರಿಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿ ಗಳು ಭಾಗವಹಿಸಿದರು.