ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆನಂದ ಬಾಣೂರು ಧ್ವಜಾರೋಹಣಗೈದರು. ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂ ಟಿ , ಎಸ್ ಡಿ ಎಂ ಸಿ ಸದಸ್ಯರಾದ ಶ್ರೀಮತಿ ಅನಿತಾ ಕಂಜಿಪಿಲಿ, ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಧ್ವಜವಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಆನಂದ ಬಾಣೂರು ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೋಳಿಕೆ, ಎಸ್ ಡಿ ಎಂ ಸಿ ಸದಸ್ಯರಾದ ಶ್ರೀಮತಿ ಅನಿತಾ ಕಂಜಿಪಿಲಿ ಶಾಲಾ ಮುಖ್ಯೋಪಾಧ್ಯಾಯರ ವೀಣಾ ಎಂ ಟಿ, ಹಿರಿಯ ಶಿಕ್ಷಕರಾದ ಪ್ರವೀಣ ಕುಮಾರಿ, ವಿದ್ಯಾರ್ಥಿ ನಾಯಕರಾದ ದರ್ಶನ್ ಬಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಚಿಣ್ಣರ ವನದರ್ಶನ ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ಹಮ್ಮಿಕೊಂಡ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸುಳ್ಯ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿಗಳಾದ ಚಂದ್ರು ಹಾಗೂ ಅರಣ್ಯ ಪಾಲಕರಾದ ಜಯಪ್ರಕಾಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋಕ್ಷಿತ್ ಪಿವಿ ಇವರು ಸ್ವಾಗತಿಸಿ, ಪೃಥ್ವಿನ್ ಪಿ ಎಸ್ ಅವರು ವಂದಿಸಿದರು. ಹಾಗೂ ಶಿಷ್ಮಾ ಡಿ ಎಲ್ ಮತ್ತು ಪ್ರಾಪ್ತಿ ಎಂ ಡಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.