ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಜ. 24 ರಂದು ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಬಿ. ಮೋಹನ್ ಬಾಬು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಡಿ. ಭಾಸ್ಕರ್ ರಾವ್ ಇವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕುರಿತು ಮಾಹಿತಿಯನ್ನು ನೀಡಿದರು.
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯರವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಕೆ.ನಾರಾಯಣ, ಸಹಾಯಕ ಸರಕಾರಿ ಅಭಿಯೋಜಕ ರಮೇಶ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಪಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ವಿಜ್ಞಾನ ಶಿಕ್ಷಕಿ ಮೈತ್ರಿ ಎಂ.ಬಿ ವಂದಿಸಿದರು. ಸಮಾಜ-ವಿಜ್ಞಾನ ಶಿಕ್ಷಕಿ ಸುನಿತಾ ಕೆ ಆರ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಕೀಲರುಗಳು, ಶಿಕ್ಷಕ ವೃಂದದವರು, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು